ಹೊಸದಿಗಂತ ವರದಿ ಕೊಪ್ಪಳ:
ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ತೇಲಿಬಂದಿರುವ ಮನಕಲುಕುವ ಘಟನೆ ತಾವರಗೇರಾ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ನಾಲ್ಕೈದು ದಿನಗಳ ನವಜಾತ ಶಿಶುವಾಗಿದ್ದು, ಚರಂಡಿ ನೀರಿನಲ್ಲಿ ತೇಲಿ ಬಂದಿದೆ.
ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಶಿಶುವನ್ನು ಚರಂಡಿಯಿಂದ ತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಹಾಕಿರುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ.