ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ.
ಈ ನಡುವೆ ವರದಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ತೇಲಿಕೊಂಡು ಬಂದಿದೆ. ಅದನ್ನು ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.
ಲಕ್ಕವಳ್ಳಿ ಗ್ರಾಮದ ವರದಾ ನದಿ ತೀರದಲ್ಲಿ ಈ ದೃಶ್ಯ ಕಂಡು ಬಂದಿದ್ದು, ಶವ ದಡದತ್ತ ಬರದೆ ನದಿಯಲ್ಲಿ ತೇಲಿಕೊಂಡು ಹೋಗಿದೆ. ಅದನ್ನು ಕಂಡು ಗ್ರಾಮಸ್ಥರು ಬೆರಗಾಗಿದ್ದಾರೆ.