ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ಇದರ ಸುತ್ತ ಸಾಕಷ್ಟು ಅನುಮಾನ ಮೂಡಿದೆ.
ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಹಳವುದರ ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಮತ್ತು ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14) ಮೃತಪಟ್ಟ ಬಾಲಕಿ. ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ ಬಾಲಕಿ 8ನೇ ತರಗತಿ ಓದುತ್ತಿದ್ದಳು. ಆದರೆ ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಹಲವು ಅನುಮಾನ ಉಂಟು ಮಾಡಿದ್ದು ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಶಂಕೆ ವ್ಯಕ್ತಪಡಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಭರಮಸಾಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಮೃತದೇಹವನ್ನು ಸಿರಿಗೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.