ಹೊಸದಿಗಂತ ವರದಿ ಮಡಿಕೇರಿ:
ನಾಪೋಕ್ಲು ಸಮೀಪದ ನಾಲಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡಾನೆಯೊಂದು ಸಾವಿಗೀಡಾಗಿದೆ.
ಗ್ರಾಮದ ನಿವಾಸಿ ಪರದಂಡ ಡಾಲಿ ಎಂಬವರ ತೋಟದಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಆನೆ ಮೃತಪಟ್ಟಿರುವುದನ್ನು ಗಮನಿಸಿದ ತೋಟದ ಕಾರ್ಮಿಕರು ಮಾಲಕರಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಆನೆಯ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.



