ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರದಂದು ಕಡಬದಲ್ಲಿ ಪತ್ತೆಯಾಗಿದೆ.
ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ . ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು. ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ.
ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.