IRS ಅಧಿಕಾರಿ ಅಪಾರ್ಟ್‍ಮೆಂಟ್‍ನಲ್ಲಿ ಯುವತಿ ಶವ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತೀಯ ಕಂದಾಯ ಇಲಾಖೆಯ (IRS) ಅಧಿಕಾರಿ ಸೌರಭ್ ಮೀನಾ ಅವರ ನೋಯ್ಡಾದ (Noida) ಅಪಾರ್ಟ್‍ಮೆಂಟ್‍ನಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ .

ಮೃತ ಮಹಿಳೆಯನ್ನು ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‍ನ (ಬಿಹೆಚ್‍ಇಎಲ್) ಮಾನವ ಸಂಪನ್ಮೂಲ ಅಧಿಕಾರಿ ಶಿಲ್ಪಾ ಗೌತಮ್ ಎಂದು ಗುರುತಿಸಲಾಗಿದೆ.

ಇನ್ನು ಶಿಲ್ಪಾ ಹಾಗೂ ಸೌರಭ್ ಕಳೆದ ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದು, ಡೇಟಿಂಗ್ ಅಪ್ಲಿಕೇಶನ್ (Dating app) ಮೂಲಕ ಪರಿಚಯವಾಗಿದ್ದು, ಸೌರಭ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿಲ್ಪಾಳ ತಂದೆ ಗೌತಮ್, ಸೌರಭ್ ವಿರುದ್ಧ ವಂಚನೆ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದು, ಆಗಾಗ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!