Thursday, February 9, 2023

Latest Posts

ಗ್ರೇಟರ್ ನೋಯ್ಡಾದಲ್ಲಿ ಕಂಟೈನರ್ ವಾಹನಕ್ಕೆ ಬಸ್ ಡಿಕ್ಕಿ:ಓರ್ವ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡಿಸೆಂಬರ್ 20, ಮಂಗಳವಾರ ಮುಂಜಾನೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಗ್ರೇಟರ್ ನೋಯ್ಡಾದ ಗಲ್ಗೋಟಿಯಾ ವಿಶ್ವವಿದ್ಯಾಲಯದ ಬಳಿಯ ಡಂಕೌರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ದಟ್ಟವಾದ ಮಂಜಿನಿಂದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು 15 ಅಡಿ ಕೆಳಗೆ ಬಿದ್ದಿದೆ.

ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!