January 31, 2026
Saturday, January 31, 2026
spot_img

ಸಾರಿಗೆ ಬಸ್ ಗಳ ಮೇಲಿನ ತಂಬಾಕು ಜಾಹೀರಾತು ತೆರವಿಗೆ ಡೆಡ್ ಲೈನ್ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಾರಿಗೆ ಬಸ್ಸುಗಳ ಮೇಲಿನ ತಂಪಾಕು ಉತ್ಪನ್ನಗಳನ್ನು ಉತ್ತೇಜಿಸುವಂತ ಜಾಹೀರಾತು ತೆರವಿಗೆ ಈಗಾಗಲೇ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದು, ಈ ಬೆನ್ನಲ್ಲೇ ಸರ್ಕಾರ ಡೆಡ್ ಲೈನ್ ಫಿಕ್ಸ್ ಮಾಡಿದೆ.

ಮುಂದಿನ 15 ದಿನಗಳಲ್ಲಿ ಎಲ್ಲಾ ನಿಗಮದ ಸಾರಿಗೆ ಬಸ್ಸುಗಳ ಮೇಲಿನ ತಂಬಾಕು ಉತ್ಪನ್ನಗಳನ್ನು ಉತ್ತೇಜಿಸುವಂತ ಜಾಹೀರಾತು ತೆರವಿಗೆ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲಾ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ , ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ಹಾಗೂ ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ ,ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅವುಗಳನ್ನು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ತೆರವುಗೊಳಿಸಲು ನಿರ್ದೇಶಿಸಿರುತ್ತಾರೆ ಎಂದಿದ್ದಾರೆ.

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ ಆಥವಾ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದಲ್ಲಿ, ಅವುಗಳನ್ನು 15 ದಿನಗಳಲ್ಲಿ (ದಿನಾಂಕ 15.02.2026 ರೂಳಗಾಗಿ) ತೆರವುಗೊಳಿಸಬೇಕು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !