ಕೇರಳದಲ್ಲಿ ಮಾರಣಾಂತಿಕ ಆಫ್ರಿಕನ್ ಹಂದಿ ಜ್ವರ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯಲ್ಲಿ ಅತ್ಯಂತ ಸಾಂಕ್ರಾಮಿಕ, ಮಾರಣಾಂತಿಕ ಎಂದು ಗುರುತಿಸಲಾಗಿರುವ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಇಲ್ಲಿನ ಎರಡು ಫಾರ್ಮ್ ಗಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಹೊಸ ಅತಂಕಕ್ಕೆ ಕಾರಣವಾಗಿದೆ.

ಗೊತ್ತಾಗಿದ್ದು ಹೇಗೆ?

ಇಲ್ಲಿನ ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ್ದವು. ಇದರ ಕಾರಣ ತಿಳಿಯಲು ಸಾವನ್ನಪ್ಪಿದ ಹಂದಿಗಳ ಮಾದರಿ ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಲ್ಯಾಬ್‌ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ರಿಪೋಟ್೯ ಬಂದಿದ್ದು, ಪರೀಕ್ಷಾ ಫಲಿತಾಂಶದಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎರಡನೇ ಫಾರ್ಮ್‌ನ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ.

ಏನಿದು ಆಫ್ರಿಕನ್ ಹಂದಿ ಜ್ವರ?

ದೇಶೀಯ ತಳಿಗಳ ಹಂದಿಗಳ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ವೈರಲ್ ಕಾಯಿಲೆಯೇ ಈ ಆಫ್ರಿಕನ್ ಹಂದಿಜ್ವರ. ಈ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ. ಬಿಹಾರ ಸೇರಿದಂತೆ ಕೆಲವು ಈಶಾನ್ಯ ರಾಜ್ಯಗಳಲ್ಲಿ ಈ ಜ್ವರ ವರದಿಯಾಗಿದೆ ಎಂದು ಕೇಂದ್ರ ಇತ್ತೀಚೆಗಷ್ಟೇ ಎಚ್ಚರಿಕೆ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!