ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನಲ್ಲಿ ಪತ್ರಕರ್ತರೊಬ್ಬರ ಮೇಲೆ ತಂಡವೊಂದು ಮಾರಕಾಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಈ ಸಂಬಂಧ ಆರೋಪಿಯೊಬ್ಬನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಕೀಲ ಯದುನಂದನ್ ಬಂಧಿತನಾಗಿದ್ದು ಈತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ನಗರದ ಅಶೋಕ ನಗರದಲ್ಲಿ ಘಟನೆ ನಡೆದಿದೆ. ಖಾಸಗಿ ವಾಹಿನಿಯ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.