ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಯೊಂದು ಏಕಾಏಕಿ ದಾಳಿ ಮಾಡಿ ಕಚ್ಚಿ ತಲೆಗೆ ಗಾಯಗೊಳಿಸಿದೆ.
ನಾಲ್ಕು ವರ್ಷದ ಮೊಹಮ್ಮದ್ ಕೈಫ್, ಹಜಲ್ ಗಂಭೀರವಾಗಿ ಗಾಯಗೊಂಡಿರುವ ಮಕ್ಕಳು.
ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಪಟ್ಟಣದಲ್ಲಿ ಒಂದೇ ವಾರದಲ್ಲಿ ಏಳು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.