Sunday, October 12, 2025

ಬಂಗಾಳದಲ್ಲಿ ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ದೀದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ನಿಯೋಗದ ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಹಿನ್ನೆಲೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಸಿಲಿಗುರಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ,ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಸಂಸದ ಖಗೆನ್ ಮುರ್ಮು ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಖಗೆನ್ ಅವರು ರಾಜ್ಯದ ಉತ್ತರ ಭಾಗದಲ್ಲಿ ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾಗ ನಾಗರ್ಕಟದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಪ್ರವಾಹ ಪೀಡಿತ ಉತ್ತರ ಬಂಗಾಳದಲ್ಲಿ ಇಬ್ಬರು ಬಿಜೆಪಿ ನಾಯಕರಾದ ಮುರ್ಮು ಮತ್ತು ಶಾಸಕ ಶಂಕರ್ ಘೋಷ್ ಅವರ ಮೇಲೆ ಹಲ್ಲೆ ನಡೆದ ಒಂದು ದಿನದ ನಂತರ ಮಮತಾ ಅವರು ಆಸ್ಪತ್ರೆ ಭೇಟಿ ನೀಡಿದ್ದಾರೆ.

ಮುಖ್ಯಮಂತ್ರಿಗಳು ವೈದ್ಯಕೀಯ ಸಲಹೆಯನ್ನು ಎಚ್ಚರಿಕೆಯಿಂದ ಪಾಲಿಸುವಂತೆ ವಿನಂತಿಸಿದರು ಮತ್ತು ಸರ್ಕಾರ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಅವರ ಕುಟುಂಬಕ್ಕೆ ತಿಳಿಸಿದರು.

error: Content is protected !!