ಅಪರಿಚಿತ ಗುಂಪಿನಿಂದ ನಮಾಜ್​ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ರಾತ್ರಿ ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ಗೆ ನುಗ್ಗಿದ ಗುಂಪೊಂದು ನಮಾಜ್ ಮಾಡಿದ ಆರೋಪದ ಮೇಲೆ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.

ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಅಹಮದಾಬಾದ್ ಮೂಲದ ಕ್ಯಾಂಪಸ್‌ನಲ್ಲಿ ಯಾವುದೇ ಮಸೀದಿ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದ್ದರಿಂದ ಅವರು ರಂಜಾನ್ ಸಮಯದಲ್ಲಿ ರಾತ್ರಿ ನೀಡಲಾಗುವ ತರಾವೀಹ್ ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಮಾರಕಾಸ್ತ್ರಗಳೊಂದಿಗೆ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿ, ಅವರ ಕೊಠಡಿಗಳನ್ನು ಧ್ವಂಸಗೊಳಿಸಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!