Tuesday, February 27, 2024

ಮಾರಕ ಬೌಲಿಂಗ್‌ ಪ್ರದರ್ಶನ: ಐಸಿಸಿ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್‌ ಬುಮ್ರಾ ನಂ.1!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್‌ ವಿರುದ್ಧ ನಡೆದ ಟೆಸ್ಟ್‌ ಸರಣಿಯ 2ನೇ ಪಂದ್ಯದಲ್ಲಿ ಮಾರಕ ಬೌಲಿಂಗ್‌ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಐಸಿಸಿ ರ‍್ಯಾಂಕಿಂಗ್‌ನಲ್ಲಿ (ICC Test Rankings) ನಂ.1 ಸ್ಥಾನಕ್ಕೇರಿದ್ದಾರೆ. ಈ ಮೂಲಕ ದೇಶದ ಇತಿಹಾಸದಲ್ಲೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ 6 ವಿಕೆಟ್‌ ಪಡೆದಿದ್ದ ಬುಮ್ರಾ, 2ನೇ ಪಂದ್ಯದಲ್ಲಿ 9 ವಿಕೆಟ್‌ಗಳನ್ನ ಉರುಳಿಸಿ ಐಸಿಸಿ ರ‍್ಯಾಂಕಿಂಗ್‌ನಲ್ಲಿ (ICC Test Rankings) ನಂ.1 ಸ್ಥಾನಕ್ಕೇರಿದ್ದಾರೆ.

2ನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 15.5 ಓವರ್‌ಗಳಲ್ಲಿ 45 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದಿದ್ದ ಬುಮ್ರಾ, 2ನೇ ಇನ್ನಿಂಗ್ಸ್‌ನಲ್ಲಿ 17.2 ಓವರ್‌ಗಳಲ್ಲಿ 3 ವಿಕೆಟ್‌ ಪಡೆದು ಮಿಂಚಿದ್ದಾರೆ. ಈ ಮೂಲಕ 881 ಶ್ರೇಯಾಂಕಗಳೊಂದಿಗೆ ನಂ.1 ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗಷ್ಟೇ ಬುಮ್ರಾ ಟೆಸ್ಟ್‌ನಲ್ಲಿ ಅತಿ ವೇಗವಾಗಿ 150 ವಿಕೆಟ್ ಪಡೆದ ಏಷ್ಯಾದ 2ನೇ ಆಟಗಾರ ಎಂಬ ಮಹತ್ವದ ಮೈಲುಗಲ್ಲು ಸಾಧಿಸಿದ್ದರು. ಈ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್‌ನಲ್ಲೂ ನಂ.1 ಪಟ್ಟಕ್ಕೇರಿದ್ದಾರೆ. ಇದರೊಂದಿಗೆ ಪುರುಷರ ಟೆಸ್ಟ್‌ ಕ್ರಿಕೆಟ್‌ ಬೌಲಿಂಗ್‌ ರ‍್ಯಾಂಕಿಂಗ್‌ನಲ್ಲಿ ಮೂವರು ಭಾರತೀಯರು ಟಾಪ್‌-10 ನಲ್ಲಿ ಸ್ಥಾನ ಪಡೆದುಕೊಂಡಂತಾಗಿದೆ. 881 ಶ್ರೇಯಾಂಕದೊಂದಿಗೆ ವೇಗಿ ಜಸ್ಪ್ರೀತ್‌ ಬುಮ್ರಾ ನಂ.1 ಸ್ಥಾನದಲ್ಲಿದ್ದರೆ, ನಂ.1 ಸ್ಥಾನದಲ್ಲಿದ್ದ ಅಶ್ವಿನ್‌ 841 ಶ್ರೇಯಾಂಕದೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದರೊಂದಿಗೆ ರವೀಂದ್ರ ಜಡೇಜಾ 746 ಶ್ರೇಯಾಂಕದೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!