ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 175 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. 315 ಮಂದಿ ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಎಂಪಿಯಲ್ಲಿ 115 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, 127 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಅಂಜನಾಪುರದ 11 ವರ್ಷದ ಬಾಲಕ ಇಂದು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಹಾಗಿದ್ರೆ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಪ್ರಕರಣ ದಾಖಲು:
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 115 ಡೆಂಗ್ಯೂ ಪ್ರಕರಣ ದಾಖಲು, ಮಂಡ್ಯ ಜಿಲ್ಲೆಯಲ್ಲಿ 26, ಕೊಡಗಿನಲ್ಲಿ 11 ಪ್ರಕರಣ ದಾಖಲು, ವಿಜಯಪುರದಲ್ಲಿ 9, ಗದಗ ಜಿಲ್ಲೆಯಲ್ಲಿ 8, ಉಡುಪಿ ಜಿಲ್ಲೆಯಲ್ಲಿ 2 ಡೆಂಗ್ಯೂ ಪ್ರಕರಣಗಳು ಇವತ್ತು ದಾಖಲಾಗಿವೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯ ಸರಕಾರ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಹೃದ್ರೋಗ ತಜ್ಞ ಹಾಗೂ ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದ್ದಾರೆ.