ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಡೆಂಗ್ಯೂ ಜ್ವರ ಜನರನ್ನು ಬಾಧಿಸುತ್ತಿದೆ. ಇದೇ ವೇಳೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ.
ಹಾವೇರಿ ತಾಲೂಕಿನ 12 ವರ್ಷದ ಬಾಲಕ ಇಲಿ ಜ್ವರಕ್ಕೆ ತುತ್ತಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಒಂದು ವಾರದಿಂದ ನಿರಂತರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಕಾಮಾಲೆ ಕಾಣಿಸಿಕೊಂಡಿತ್ತು. ಚೇತರಿಸಿಕೊಂಡ ಬಳಿಕ ಚಿಕಿತ್ಸೆಗಾಗಿ ನಗರಕ್ಕೆ ತೆರಳಿದ್ದರು. ಜ್ವರದ ಕಾರಣ ಬಾಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಈ ವೇಳೆ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದೆ.
ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.