ಪಪುವಾ ನ್ಯೂಗಿನಿಯಾದಲ್ಲಿ ಭೀಕರ ಭೂಕುಸಿತ: ಸಾವಿನ ಸಂಖ್ಯೆ 670ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ (Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ. ಸಾವಿರಾರು ಜನ ಗಾಯಗೊಂಡಿದ್ದು, ನೂರಾರು ಜನ ಭೂಮಿ ಅವಶೇಷಗಳ ಅಡಿಯಲ್ಲಿ ಹುದುಗಿಹೋಗಿವೆ.

ಈ ಕುರಿತು ವಿಶ್ವಸಂಸ್ಥೆ ಮಾಹಿತಿ ನೀಡಿದ್ದು, ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಎಂಗಾ ಪ್ರಾಂತ್ಯದ ಯಂಬಾಳಿ ಗ್ರಾಮದ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಭಾರಿ ಪ್ರಮಾಣದ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ‘ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

ಅವಶೇಷಗಳ ಅಡಿಯಲ್ಲಿ ಯಾರಾದರೂ ಬದುಕಿದ್ದಾರೇನೋ ಎಂಬ ವಿಶ್ವಾಸದಿಂದ ಭೂಮಿಯನ್ನು ಅಗೆಯಲಾಗುತ್ತಿದೆ. ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಜನರು ಕೂಡ ಇದಕ್ಕೆ ಸಾಥ್‌ ನೀಡುತ್ತಿದ್ದಾರೆ. ಆದರೆ, ಗಾಯಾಳುಗಳ ಬದಲು ಶವಗಳನ್ನೇ ಹೊರ ತೆಗೆಯುವಂತಾಗಿದೆ. ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನಲ್ಲಿ 4 ಸಾವಿರ ಜನ ವಾಸವಿದ್ದರು. ದಿಢೀರನೆ ಭೂಕುಸಿತ ಉಂಟಾದ ಕಾರಣ ಇಡೀ ಗ್ರಾಮವೇ ನರಕಸದೃಶವಾಗಿದೆ ಎಂಬುದಾಗಿ ಮಾಧ್ಯಮಗಳ ವರದಿಗಳಿಂದ ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!