ಚಿಕ್ಕಬಳ್ಳಾಪುರದಲ್ಲಿ ಮಾರಣಾಂತಿಕ ಝೀಕಾ ವೈರಸ್ ಪತ್ತೆ, ಎಚ್ಚೆತ್ತ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದಲ್ಲಿ ಆತಂಕ ಸೃಷ್ಟಿಸಿದ್ದ ಮಾರಣಾಂತಿಕ ಝೀಕಾ ವೈರಸ್‌ ಈಗ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಬೆಂಗಳೂರಿಗೆ ಹತ್ತಿರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಹಲ್ಳಿಯಲ್ಲಿನ ಸೊಳ್ಳೆಗಳನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಗೊಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದ ಪತ್ತೆಯಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಅಲರ್ಟ್‌ ಆಗಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾರಣಾಂತಿಕ ವೈರಲ್‌ ಹರಡದಂತೆ ತಡೆಯಲು ಕ್ರಮಕ್ಕೆ ಮುಂದಾಗಿದೆ. ಇದೀಗ ತಲಕಾಯಲಬೆಟ್ಟ ಸುತ್ತಮುತ್ತ ಐದು ಕಿಮೀ ವ್ಯಾಪ್ತಿಯಲ್ಲಿ ಅಲರ್ಟ್‌ ಜಾರಿ ಮಾಡಿದೆ. ಅದರಂತೆ ವೆಂಕಟಾಪುರ, ವಡ್ಡಹಳ್ಳಿ, ದಿಬ್ಬೂರಹಳ್ಳಿ, ಬಚ್ಚಹಳ್ಳಿ ಗ್ರಾಮಗಳಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದು, ಈ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಗ್ರಾಮಗಳಲ್ಲಿ ಸರ್ವೆ ಕಾರ್ಯ ಕೂಡ ನಡೆಯುತ್ತಿದೆ.

ಹಲವರ ರಕ್ತ ಪರೀಕ್ಷೆ

ಝೀಕಾ ವೈರಸ್‌ ಸೋಂಕಿನ ಬಗ್ಗೆ ತಿಳಿಯುತ್ತಿದ್ದಂತೆ ಗ್ರಾಮದ ಮೂವತ್ತು ಗರ್ಭಿಣಿಯರು ಹಾಗೂ ಜ್ವರ ಪೀಡಿತ ಜನರ ರಜಕ್ತದ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಭ್ರೂಣದ ಮೇಲೆ ಹೆಚ್ಚಿನ ಪರಿಣಾಮ ಬೀರುವುದರಿಂದ ಗರ್ಭಿಣಿಯರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ.

ವೈರಸ್‌ನ ರೋಗ ಲಕ್ಷಣಗಳು

ತಲೆನೋವು, ಜ್ವರ, ಕಣ್ಣಿನ ಉರಿ, ಕನ್ಣು ಕೆಂಪಾಗುವುದು, ಕೀಲು ನೋವು ಕಾಣಿಸಿಕೊಲ್ಳುತ್ತದೆ. ಈ ರೋಗಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!