ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟದ ಎರಡು ಪ್ರಮುಖ ಖಾತೆಗಳ ಹೊಣೆ ಹೊತ್ತಿದ್ದು, ಕೆಪಿಸಿಸಿ ಉಸ್ತುವಾರಿಯೂ ಇರುವುದರಿಂದ ಎಲ್ಲವನ್ನು ಸಮರ್ಥವಾಗಿ ನಿಭಾಯಿಸುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ಕೊಡಿ ಅಂತ ಕೆಲ ಮಂತ್ರಿಗಳು ಮತ್ತು ಶಾಸಕರು ಕೇಳಿರಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ತಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಇಂಥ ಪರಿಸ್ಥಿತಿ ಎದುರಾಗಿತ್ತು, ಆಗ ಸಚಿವ ಸ್ಥಾನ ತ್ಯಜಿಸಿ ಪಕ್ಷದ ಅಧ್ಯಕ್ಷಗಿರಿಯನ್ನು ಆಯ್ದುಕೊಂಡಿದ್ದೆ ಎಂದು ಹೇಳಿದರು.