ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ವಿರುದ್ಧ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಡೀನ್ ಎಲ್ಗರ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ವಿರಾಟ್ ಕೊಹ್ಲಿ ನನ್ನ ಮೇಲೆ ಉಗುಳಿದ್ದರು. ಇದಾದ ಎರಡು ವರ್ಷದ ನಂತರ ಕ್ಷಮೆ ಕೇಳಿದ್ದರು ಎಂದು ಹೇಳಿದ್ದಾರೆ. ಎಬಿ ಡಿ ವಿಲಿಯರ್ಸ್ಗೆ ಈ ಬಗ್ಗೆ ಗೊತ್ತಾಗಿದ್ದು, ಅವರ ಮಧ್ಯಸ್ಥಿಕೆ ನಂತರ ಕೊಹ್ಲಿ ನನ್ನ ಬಳಿ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ್ದಾರೆ.