ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಬುಧವಾರ ವಾಜಪೇಯಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬೆಳಗ್ಗೆಯೇ ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ‘ಸದೈವ್ ಅಟಲ್’ ಸ್ಮಾರಕಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪುಷ್ಪ ನಮನ ಸಲ್ಲಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ ‘ಸದೈವ್ ಅಟಲ್’ ನಲ್ಲಿ ಪುಷ್ಪ ನಮನ ಸಲ್ಲಿಸಿದರು.