ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವಲ್ಲೇ ಕೋವಿಡ್‌ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಗೆ ನಿರಾಕರಿಸಬೇಡಿ ಎಂದು ಸ್ಮಶಾನ ಹಾಗೂ ಚಿತಾಗಾರಗಳಿಗೆ ಸರ್ಕಾರ ಸೂಚನೆ ನೀಡಿದೆ.
ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಅಂತ್ಯಕ್ರಿಯೆ ನಡೆಸುವ ವೇಳೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಕೊರೋನಾ ಸಾವು ಎಂದು ಅಂತ್ಯಕ್ರಿಯೆಗೆ ನಿರಾಕರಿಸಬೇಡಿ ಎಂದು ಹೇಳಿದೆ.