ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್‌ : ಉತ್ತರ ನೀಡುವಂತೆ ರಾಜ್ಯಕ್ಕೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಅಲ್ಲದೇ, ವನ್ಯಜೀವಿ ಅಭಯಾರಣ್ಯಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದೆ. ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಮಲೆ ಮಹದೇಶ್ವರ (ಎಂಎಂ) ಬೆಟ್ಟಗಳ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ತಿಂಗಳು ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಮತ್ತು ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ 80% ಖಾಲಿ ಇವೆ ಎಂದು ನ್ಯಾಯಾಲಯವು ಬೇಸರ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!