spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೊಲೀಸ್ ವಶದಲ್ಲಿದ್ದ ವಿದೇಶಿ ಪ್ರಜೆ ಸಾವು: ಪೊಲೀಸ್ ಠಾಣೆ ಮುಂದೆ ಆಫ್ರಿಕನ್ ಪ್ರಜೆಗಳ ಪ್ರತಿಭಟನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ಜೆ.ಸಿ. ನಗರ ಠಾಣೆ ಎದುರು ನಡೆದಿದೆ.
5ಗ್ರಾಂ ಎಂಡಿಎಂ ಡ್ರಗ್ಸ್ ಜೊತೆಗೆ ಆಫ್ರಿಕನ್ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ವಶದಲ್ಲಿದ್ದ ಆರೋಪಿ ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ ಎನ್ನಲಾಗಿದೆ.
ಪೊಲೀಸರ ದೌರ್ಜನ್ಯದಿಂದಲೇ ತಮ್ಮ ಸ್ನೇಹಿತ ಹಾಗೂ ಸಂಬಂಧಿ ಸಾವನ್ನಪ್ಪಿದ್ದಾನೆ. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿ ಆಫ್ರಿಕನ್ ಪ್ರಜೆಗಳು ಜೆ.ಸಿ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಾಠಿಚಾರ್ಜ್
ಧರಣಿ ವೇಳೆ ಆಫ್ರಿಕನ್ ಪ್ರಜೆಗಳು ವಾಗ್ವಾದ ನಡೆಸಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಆಫ್ರಿಕನ್ ಪ್ರಜೆಗಳನ್ನು ಬಂಧಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss