ಬಳ್ಳಾರಿ ಬಿಮ್ಸ್​ನಲ್ಲಿ ನಿಲ್ಲದ ಬಾಣಂತಿಯರ ಮರಣ, 2 ದಿನಗಳ ಅಂತರದಲ್ಲಿ 2ನೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಾಣಂತಿ ರೇಷ್ಮಾ ಬಿ (25) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ರೇಷ್ಮಾ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರೇಷ್ಮಾ ಬಿ ಅವರು ಜನವರಿ 4 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ರೇಷ್ಮಾ ಅವರಿಗೆ ನಾರ್ಮಲ್ ಹೆರಿಗೆ ಆಗುತ್ತೆ ಅಂತ ವೈದ್ಯರು ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಿಸಿಕೊಂಡಿದ್ದಾರೆ. ಎರಡು ದಿನದ ಬಳಿಕ ಜನವರಿ 6 ರಂದು ನಾರ್ಮಲ್ ಹರಿಗೆ ಕಷ್ಟ, ಹೀಗಾಗಿ ಸಿಜರಿಯನ್ ಮೂಲಕ ಹೆರಿಗೆ ಮಾಡಬೇಕು ಅಂತ ಹೇಳಿ ಸಿಜರಿಯನ್ ಮಾಡಿದ್ದಾರೆ. ಗಂಡು ಮಗು ಜನಿಸಿದೆ. ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿದೆ ಅಂತ ವೈದ್ಯರು ಕುಟುಂಬಸ್ಥರಿಗೆ ಹೇಳಿದ್ದಾರೆ.

ಜನವರಿ 8 ರಂದು ತಾಯಿ ಮಗುವನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಅದರೆ, ಮನೆಗೆ ಹೋಗಿ ವಾರದ ಬಳಿಕ ರೇಷ್ಮಾಗೆ ಆಯಾಸ, ಉಸಿರಾಟದ ಸಮಸ್ಯೆ ಕಂಡು ಬಂದಿದೆ. ಹೀಗಾಗಿ, ಜನವರಿ 14 ರಂದು ಮತ್ತೆ ಬಿಮ್ಸ್ ಆಸ್ಪತ್ರೆಗೆ ಬಾಣಂತಿ ರೇಷ್ಮಾರನ್ನು ದಾಖಲು ಮಾಡಿದ್ದಾರೆ. ಸತತ 21 ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ರೇಷ್ಮ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ರೇಷ್ಮಾ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!