ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

ದಿಗಂತ ವರದಿ ವಿಜಯಪುರ:

ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಂಗಡಗಿ ಗ್ರಾಮದ ಬಸವರಾಜ ಡೂಂಗರಗಾವಿ (28) ಸಾವಿಗೀಡಾದ ಯೋಧ.

ಯೋಧ ಬಸವರಾಜ ಡೂಂಗರಗಾವಿ ಸೇವೆಗೆ ಸೇರಿ 8-10 ವರ್ಷಗಳಾಗಿದ್ದು, ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯದಲ್ಲಿದ್ದು, ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!