ಚಿಕ್ಕಮಗಳೂರಿನಲ್ಲಿ ಬೆಂಗಳೂರಿನ ಯುವಕ-ಯುವತಿ ಸಾವು, ಸಿಕ್ಕಾಪಟ್ಟೆ ಅನುಮಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ.

ಯುವತಿ ಕಾರಿನಲ್ಲಿ ಸಾವನ್ನಪ್ಪಿದ್ದಾಳೆ. ಯುವತಿ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಆತ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್ ನಿಂದ ನೇಣು ಹಾಕಿಕೊಂಡಿದ್ದಾನೆ. ಆತ ನೇಣು ಹಾಕಿಕೊಂಡಿರುವ ಜಾಗ ಕೂಡ ಒಂದು ರೀತಿ ಅನುಮಾನಾಸ್ಪದವಾಗಿದೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದೆ. ಆದರೆ ಆತನ ಶವ ನೇತಾಡುತ್ತಿತ್ತು. ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಎರಡು ಚಕ್ರಗಳು ಇಳಿದಿದ್ದು ಕಾರು ಚರಂಡಿಗೆ ಏಕೆ? ಹೇಗೆ ಇಳಿಯಿತು ಎಂಬ ಪ್ರಶ್ನೆ ಮೂಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!