Wednesday, August 10, 2022

Latest Posts

ಅಪಘಾತದಲ್ಲಿ ಯುವಕ ಸಾವು: ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರಜ್ವಲ್

ಹೊಸದಿಗಂತ ವರದಿ, ಕುಶಾಲನಗರ:

ಕಳೆದ ಎರಡು ದಿನಗಳ ಹಿಂದೆ ಬೈಕ್’ಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸೊದ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆದರೆ ಅಂಗಾಂಗ ದಾನ ಮಾಡುವ ಮೂಲಕ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ಸುರೇಶ್ ಎಂಬವರ ಪುತ್ರ ಪ್ರಜ್ವಲ್ (22) ಸಾವಿಗೀಡಾದ ಯುವಕ.
ಕೂಡ್ಲೂರು ಕೈಗಾರಿಕಾ ಕಾಫಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ವಲ್, ಕಳೆದ ಎರಡು ದಿನಗಳ ಹಿಂದೆ ರಾತ್ರಿ ಕೂಡಿಗೆಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ಸಂದರ್ಭ ಕೂಡುಮಂಗಳೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಪವನ ಎಂಬವರ ಬೈಕ್ ಡಿಕ್ಕಿಯಾಗಿತ್ತು. ಪರಿಣಾಮ ಪ್ರಜ್ವಲ್ ತಲೆ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿತ್ತು.
ಗಾಯಾಳುವಿಗೆ ಕುಶಾಲನಗರ ಅರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಮೈಸೂರು ಅಪೋಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಗುರುವಾರ ಸಾವನ್ನಪ್ಪಿದ್ದಾರೆ.
ಅಂಗಾಂಗ ದಾನ: ಬೈಕ್ ಅವಘಡದಲ್ಲಿ ಸಾವನ್ನಪ್ಪಿದ ಯುವಕ ಪ್ರಜ್ವಲ್’ನ ಅಂಗಾಂಗಳನ್ನು ದಾನವಾಗಿ ಮೈಸೂರು ಅಪೋಲೋ ಆಸ್ಪತ್ರೆಗೆ ನೀಡಲಾಗಿದೆ.
ನಮನ‌ ಸಲ್ಲಿಕೆ: ಅಂಗಾಗಗಳನ್ನು ದಾನವಾಗಿ ನೀಡಿದ ಬಳಿಕ ಕೂಡಿಗೆಗೆ ಆಗಮಿಸಿದ ಪ್ರಜ್ವಲ್ ಪಾರ್ಥೀವ ಶರೀರಕ್ಕೆ ಗೌರವ ನಮನ‌ ಸಲ್ಲಿಸಲಾಯಿತು.
ಕುಶಾಲನಗರ ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ಸೇರಿದಂತೆ, ಸ್ಥಳೀಯ ಗ್ರಾಪಂ ಜನಪ್ರತಿನಿಧಿಗಳು, ಆಟೋ ಚಾಲಕರುಗಳು, ನೂರಾರು ಮಂದಿ ಯುವಕರು ಮೃತದೇಹ ಬರಮಾಡಿಕೊಂಡು ಪುಷ್ಪಾರ್ಚನೆ ಮಾಡಿ ಅಂತಿಮ‌ ನಮನ‌ ಸಲ್ಲಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss