ಅಮೆರಿಕದಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿಯ ಸಾವು: ಹತ್ತಕ್ಕೇರಿತು ‘ನಿಗೂಢ ಸಾವು’ ಪ್ರಕರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ೨೦೨೪ರ ಆರಂಭದಿಂದ, ಇದುವರೆಗೆ ಅಮೆರಿಕದಲ್ಲಿ ಸಾವನ್ನಪ್ಪಿದ ಭಾರತೀಯ, ಭಾರತೀಯ ಮೂಲದ ವಿದ್ಯಾರ್ಥಿಗಳ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

ಉಮಾ ಸತ್ಯ ಸಾಯಿಗಡ್ಡೆ ಎಂಬಾಕೆ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈ ಸಾವಿನ ನಿಗೂಢತೆ ಬೇಧಿಸಲು ತನಿಖೆ ಆರಂಭವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತವಾಸ ಕಚೇರಿ ತಳಿಸಿದೆ.

ಈಕೆ ಉಮಾ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಈಕೆಯ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದೂ ದೂತವಾಸ ಕಚೇರಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!