ಅರ್ಜುನ ಆನೆ ಸಾವು: ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಎಂದ ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಡಾನೆ ಕಾರ್ಯಾಚರಣೆ ವೇಳೆ​​ ಅರ್ಜುನ ಆನೆ (Arjun Elephant) ಮೃತಪಟ್ಟಿದ್ದಾನೆ. ಅನೇಕರು ಸಾವಿನ ಈ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ (Forest Department) ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಘೋಷಿಸಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, 15 ದಿನದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ದಸರಾ ಆನೆ ಅರ್ಜುನ‌ನನ್ನು ಕಳೆದುಕೊಂಡಿದ್ದು ದುಃಖಕರ. ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ನೋವು ತಂದಿದೆ. ಅರ್ಜುನನಿಗೆ ನಾವು ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದರು. ಹೀಗಾಗಿ ಆನೆ ಸೆರೆ ಹಿಡಿಯಲು ಸಾಕಷ್ಟು ಒತ್ತಡ ಇತ್ತು. ಈ ಸಂಬಂಧ ನವೆಂಬರ್ 24 ರಿಂದ ಕಾರ್ಯಾಚರಣೆ ಆರಂಭ ಆಗಿತ್ತು. ಕಾರ್ಯಾಚರಣೆಯಲ್ಲಿ ನಮ್ಮ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಣೆ ಮಾಡಿದ್ದಾರೆ. ಪುಂಡಾನೆ ಏಕಾ ಏಕಿ ದಾಳಿ ಮಾಡಿದೆ. ಹೀಗಾಗಿ ಅವಘಡ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ಆದರು ಕೆಲವರು ಘಟನೆ ಬಗ್ಗೆ ಸಾಕಷ್ಟು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್​ಗೆ ಅರವಳಿಕೆ ಮದ್ದು ಬಿದ್ದಿದೆ, ಅರ್ಜುನನಿಗೆ ಗುಂಡು ತಗುಲಿದೆ ಎಂಬ ಆರೋಪವಿದೆ. ಬಾಹ್ಯ ಮರಣೋತ್ತರ ಪರೀಕ್ಷೆ ಆಗಿದೆ. ಈ ವರದಿಯಲ್ಲಿ ಗುಂಡು ತಗುಲಿದ ಬಗ್ಗೆ ಮಾಹಿತಿ ಇಲ್ಲ. ಎಸ್​ಓಪಿ ಅಪ್ಡೇಡ್ ಆಗಬೇಕಿದೆ. ಈ ಬಗ್ಗೆ ಕೂಡ ಕ್ರಮ ವಹಿಸುತ್ತೇವೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!