ಯುದ್ಧದಲ್ಲಿ ಮಕ್ಕಳ ಸಾವು ಸಹಿಸಲು ಸಾಧ್ಯವಿಲ್ಲ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಭೇಟಿ ಮಾಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದರು. ಈ ವೇಳೆ ಯುದ್ಧದಲ್ಲಿ ಮಕ್ಕಳು ಸಾವುಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ 2022 ರಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಮಾತುಕತೆಗೆ ಕರೆ ನೀಡಿರುವ ಪ್ರಧಾನಿ ಮೋದಿ,’ಈ ಯುದ್ಧದಲ್ಲಿ ಭಾರತ ಎಂದಿಗೂ ತಟಸ್ಥವಾಗಿಲ್ಲ, ನಾವು ಶಾಂತಿಯ ಪರವಾಗಿದ್ದೇವೆ’ಎಂದು ಹೇಳಿದರು.

Image

ಇಂದು ಮುಂಜಾನೆ ಕೈವ್‌ನಲ್ಲಿ ಅಧ್ಯಕ್ಷ ಝೆಲೆನ್ಸ್‌ಕಿಯವರನ್ನು ಭೇಟಿಯಾದ ಪ್ರಧಾನಿ ಮೋದಿ, ಉಕ್ರೇನ್ ಅಧ್ಯಕ್ಷರನ್ನು ಅಪ್ಪಿಕೊಳ್ಳುವ ಮೊದಲು ಉಭಯ ನಾಯಕರು ಹಸ್ತಲಾಘವ ಮಾಡಿದರು. ಇಬ್ಬರೂ ಯುದ್ಧ-ಹಾನಿಗೊಳಗಾದ ಪ್ರದೇಶಗಳು ಹಾಗೂ ದೇಶದ ಹುತಾತ್ಮ ಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರಧಾನಿ ಮೋದಿ ಅವರ ಕೈ ಝೆಲೆನ್ಸ್ಕಿಯ ಭುಜದ ಮೇಲೆ ಬಲವಾಗಿ ಉಳಿದಿತ್ತು. ಇದು ಉಕ್ರೇನ್‌ನೊಂದಿಗೆ ಭಾರತದ ಒಗ್ಗಟ್ಟಿನ ಸೂಚಕವಾಗಿದೆ.

ಈ ಯುದ್ಧ ವಿಶೇಷವಾಗಿ ಚಿಕ್ಕ ಮಕ್ಕಳಿಗೆ ವಿನಾಶಕಾರಿಯಾಗಿದೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳ ಕುಟುಂಬಕ್ಕೆ ನನ್ನ ಸಂತಾಪವಿದೆ. ಅವರಿಗೆ ದುಃಖವನ್ನು ಮರೆಯುವ ಶಕ್ತಿ ದೇವರು ನೀಡಲಿ ಎಂದು ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, ಸ್ಮಾರಕಕ್ಕೆ ಭೇಟಿ ನೀಡಿದ ಚಿತ್ರಗಳನ್ನು ಕೂಡ ಹಂಚಿಕೊಂಡಿದ್ದಾರೆ.

Image1991 ರಲ್ಲಿ ಸೋವಿಯತ್ ಒಕ್ಕೂಟದಿಂದ ಉಕ್ರೇನ್ ಸ್ವಾತಂತ್ರ್ಯ ಪಡೆದ ನಂತರ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಈ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!