ಸರ್ಜರಿ ಬಳಿಕ ಕೋಮಾಗೆ ಜಾರಿದ ದಕ್ಷ ಮಹಿಳಾ ಅಧಿಕಾರಿ ಸಾವು: ಸಿಬಿಐ ತನಿಖೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೋಧ್‍ಪುರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಅವರು ಶಸ್ತ್ರಚಿಕಿತ್ಸೆ ನಂತರ ಕೋಮಾಗೆ ಜಾರಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನನದ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿದ್ದ ಪ್ರಿಯಾಂಕಾ ಬಿಷ್ಣೋಯ್ ಹೀಗೆ ಹಠಾತ್ ಸಾವಿಗೀಡಾದ ಮಹಿಳಾ ಅಧಿಕಾರಿ, ಎರಡು ವಾರಗಳ ಹಿಂದೆ ಜೋಧ್‌ಪುರಸ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಶಸ್ತ್ರಚಿಕಿತ್ಸೆಯ ನಂತರ ಅವರ ಪರಿಸ್ಥಿತಿ ಬಿಗಾಡಿಯಿಸಿದ್ದು, ಅವರು ಮತ್ತೆ ಮೇಲೆಳಲೇ ಇಲ್ಲ. ಶಸ್ತ್ರಚಿಕಿತ್ಸೆಯ ನಂತರ ಕೋಮಾಗೆ ಜಾರಿದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

ರಾಜಾಸ್ಥಾನದ ಜೋಧ್‌ಪುರದಲ್ಲಿ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿದ್ದ ಪ್ರಿಯಾಂಕಾ ಬಿಷ್ಣೋಯ್ ಅವರು ತಮ್ಮ ಕಾರ್ಯದಕ್ಷತೆಗೆ ಹೆಸರಾಗಿದ್ದರು. ಆದರೆ ಈಗ ಅವರು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಬಿಷ್ಣೋಯ್ ಸಮುದಾಯಕ್ಕೆ ಸೇರಿದವರಾದ ಪ್ರಿಯಾಂಕಾ ಅವರ ಸಾವು ಈಗ ಆ ಸಮುದಾಯದ ಜನರಲ್ಲಿ ತೀವ್ರ ಆಕ್ರೋಶವನ್ನು ಸೃಷ್ಟಿಸಿದೆ. ಸಮುದಾಯದ ಜನ ಹಾಗೂ ಪ್ರಿಯಾಂಕಾ ಅವರ ಸಂಬಂಧಿಗಳು ಜೋಧ್‌ಪುರದ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಪೊಲೀಸ್ ತನಿಖೆ ನಡೆಸಲು ಆಗ್ರಹಿಸಿದ್ದಾರೆ.

ಈ ಸಂಬಂಧ ಜೋಧ್‌ಪುರ ಜಿಲ್ಲಾಧಿಕಾರಿ ಗೌರವ್ ಅಗರ್ವಾಲ್ ಅವರು ಐದು ಜನರ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಿಷ್ಣೋಯ್ ಸಮುದಾಯದ ನಾಯಕ ದೇವೇಂದ್ರ ಬುಡಿಯಾ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಅಧಿಕಾರಿ ಸಾವಿನ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಕೂಡ ದಕ್ಷ ಅಧಿಕಾರಿ ಪ್ರಿಯಾಂಕಾ ಸಾವಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬದವರಿಗೆ ಅವರ ಸಾವಿನ ನೋವನ್ನು ಬರಿಸುವ ಶಕ್ತಿ ನೀಡಲಿ ಎಂದು ಅವರು ಪೋಸ್ಟ್ ಮಾಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!