ಹೊಸದಿಗಂತ ಡಿಜಿಟಲ್ ಡೆಸ್ಕ್:
ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಿಮ್ಸ್ ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.
ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. IV ಹಾಗೂ ಆರ್‌ಎಲ್ ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗೇ ಬಾಣಂತಿಯರ ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ನಾಲ್ವರು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.