ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಎಲ್ಲರಿಗೂ ಸಲ್ಲುವ ಕವಿ ಎಂದೇ ಪ್ರಸಿದ್ಧರಾಗಿದ್ದ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ’ರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಸಿ.ಟಿ.ರವಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಹೀಗೆ ಹತ್ತು ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೈಯಾಡಿಸಿ ಎನ್ನೆಸ್ಸೆಲ್ ಎಂದೇ ಹೆಸರುವಾಸಿಯಾಗಿರುವ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರು ಇಂದು ಇಹಕಾಯವನ್ನಗಲಿದ್ದಾರೆ ಎಂದು ಹೇಳಿದ್ದಾರ.