Saturday, October 1, 2022

Latest Posts

ಸಚಿವ ಉಮೇಶ್ ಕತ್ತಿ ನಿಧನ: ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.

ನಿನ್ನೆ ರಾತ್ರಿ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದಂತ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ .

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂಪುಟದ ಸಹೋದ್ಯೋಗಿ ಅರಣ್ಯ ಸಚಿವ ಉಮೇಶ್ ಕತ್ತಿಯವರು ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದಂತ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಅಂದಹಾಗೇ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿಯವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಇಂದು ಸ್ವಗ್ರಾಮದಲ್ಲಿ ನೆರವೇರಿಸಲಾಗುತ್ತಿದೆ. ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೂರು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!