spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕನ್ನಡ ಸಾರಸ್ವತ, ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟ: ನಾರಾಯಣಾಚಾರ್ಯ ನಿಧನಕ್ಕೆ ಸಿಎಂ ಸಂತಾಪ

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಖ್ಯಾತ ವಿದ್ವಾಂಸ, ಲೇಖಕ, ವಾಗ್ಮಿ ಕನಕನಹಳ್ಳಿ ಶ್ರೀನಿವಾಸ ದೇಶಿಕಾಚಾರ್ಯ ನಾರಾಯಣಾಚಾರ್ಯ (ಡಾ. ಕೆ.ಎಸ್.ಎನ್) ಇಂದು ಬೆಳಗಿನ ಜಾವ ನಿಧನರಾಗಿದ್ದು, ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಖ್ಯಾತ ಚಿಂತಕರು, ಸುಪ್ರಸಿದ್ಧ ಲೇಖಕರು, ಮೇರು ವಿದ್ವಾಂಸರಾಗಿದ್ದ ಪ್ರೊ. ಕೆ.ಎಸ್. ನಾರಾಯಣಾಚಾರ್ಯರ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದು, ಅತೀವ ದುಃಖ ತಂದಿದೆ. ಅವರು ರಾಷ್ಚ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದರು. ಅವರ ನಿಧನವು ಕನ್ನಡ ಸಾರಸ್ವತ ಹಾಗೂ ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದಿದ್ದಾರೆ.

“ಅವರ ಕೃತಿಗಳ ಮೂಲಕ ಸದಾಕಾಲ ಅವರ ನೆನಪು ಸದಾಕಾಲ ಉಳಿಯಲಿ ಮತ್ತು ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ‌” ಎಂದು ಹೇಳಿದ್ದಾರೆ.

ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಜಲದರ್ಶಿನಿ ಲೇಔಟ್‌ನಲ್ಲಿರುವ ನಾರಾಯಣಚಾರ್ಯರ ನಿವಾಸದಲ್ಲಿ ಶುಕ್ರವಾರ ಸಂಜೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss