ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಇಂದು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ರಜೆ ಘೋಷಿಸಿದೆ.
ಎರಡು ಜಿಲ್ಲೆಗಳ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳಿಗೂ ಮತ್ತು ಅನುದಾನ ಪಡೆಯುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಈಗಾಗಲೇ ಪರೀಕ್ಷೆ ನಿಗದಿಯಾಗಿರುವ ಕಾಲೇಜುಗಳು ಮಾತ್ರ ತೆರೆದಿರಲಿವೆ.
ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿವಿಧಾನದಂತೆ ಇಂದು ಮೈಸೂರಿನಲ್ಲಿ ನಡೆಯಲಿದೆ. ಬೆಂಗಳೂರಿನ ಮಹಾಬೋದಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಲಿದ್ದಾರೆ.