spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗಣೇಶ ವಿರ್ಸಜನೆ ವೇಳೆ ದುರಂತ: ಮೂವರು ಯುವಕರು ನೀರು ಪಾಲು

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗಣೇಶ ವಿಸರ್ಜನೆ ವೇಳೆ  ಮೂವರು ಹುಡುಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಭಾನುವಾರ ರಾತ್ರಿ ಮುಂಬೈನ ವರ್ಸೋವಾ ಬೀಚ್‌ನಲ್ಲಿ.

ಮೃತರಿಗಾಗಿ ಶೋಧಕಾರ್ಯ ನಡೆಯುತ್ತಿದ್ದು, ಅವರ ಜೊತೆಯಲ್ಲಿದ್ದ ಇನ್ನಿಬ್ಬರನ್ನು ರಕ್ಷಿಸಲಾಗಿದೆ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

‘ಭಾನುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಐವರು ಹುಡುಗರು ನೀರು ಪಾಲಾಗಿದ್ದಾರೆ ಎಂಬ ಮಾಹಿತಿ ಬಂತು, ತಕ್ಷಣ ಸ್ಥಳಕ್ಕೆ ದೌಡಾಯಿಸಿದೆವು. ಐವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಅಗ್ನಿಶಾಮಕ  ಅಧಿಕಾರಿ ಹೇಳಿದ್ದಾರೆ.

‘ಅಗ್ನಿಶಾಮಕ ಯಂತ್ರ, ಒಂದು ದೋಣಿ, ಜೀವರಕ್ಷಕರು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನೌಕಾಪಡೆಯ ಡೈವರ್‌ಗಳ ಸಹಾಯವನ್ನು ಕೋರಲಾಗಿದೆ’ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss