ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಬಂಧಿಸಲಾಗಿದೆ.
ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೇಟ್‌ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್ ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಕಳೆದ ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ ಮಧ್ಯ ದೆಹಲಿಯ ಯುಪಿಎಸ್ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಗೆ ನೀರು ನುಗ್ಗಿದ ಪರಿಣಾಮ 20 ವರ್ಷದ ಮೂವರು ಯುವ ಐಎಎಸ್ ಆಕಾಂಕ್ಷಿಗಳು ಮೃತಪಟ್ಟಿದ್ದರು.