ವಿದ್ಯುತ್ ಸ್ಪರ್ಶದಿಂದ ವನ್ಯಜೀವಿಗಳ ಸಾವು | ದುರಂತ ತಪ್ಪಿಸಲು ಮಾರ್ಗಸೂಚಿ ರಚಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಿದ್ಯುತ್ ಸ್ಪರ್ಶದಿಂದ ಹೆಚ್ಚುತ್ತಿರುವ ವನ್ಯಜೀವಿಗಳು ಹಾಗೂ ಜನ ಸಾಮಾನ್ಯರ ಸಾವವನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಲು ಮಾರ್ಗಸೂಚಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ರಾಜ್ಯದಲ್ಲಿ 75 ಆನೆಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿವೆ ಎಂದು ಉಲ್ಲೇಖಿಸಿ ದಾಖಲಾದ ಪ್ರಕರಣವೊಂದರ ವಿಚಾರಣೆ ವೇಳೆ ಕೋರ್ಟ್ ಈ ಸೂಚನೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗಿಯ ಪೀಠ ಸಾವವನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಲು ಮಾರ್ಗಸೂಚಿ ರೂಪಿಸಿ ಉನ್ನತ ಮಟ್ಟದ ಸಮಿತಿ ರಚಿಸುವ ಕುರಿತು ನೋಟಿಸ್ ಜಾರಿ ಮಾಡಿದೆ.

ಭದ್ರಾ ಸಂರಕ್ಷಿತ ಅರಣ್ಯ ಪ್ರದೇಶದಿಂದ ಏಳು ಆನೆಗಳು ಆಹಾರ ಅರಸಿ ಬಂದಿದ್ದವು, ಅದರಲ್ಲಿ ಎರಡು ಗಂಡು ಆನೆಗಳು ವಿದ್ಗುತ್ ತಗುಲಿ ಮೃತಪಟ್ಟಿದ್ದವು, ಇದನ್ನು ಆಧರಿಸಿ ಅರ್ಜಿದಾರರು ಕೋರ್ಟ್ ಮೊರೆ ಹೋಗಿದ್ದರು .

ರಾಜ್ಯದಲ್ಲಿ 75 ಆನೆಗಳ ಸಾವನ್ನಪ್ಪಿದೆ.ಚಾಮರಾಜನಗರದಲ್ಲಿ 36, ಮೈಸೂರಿನಲ್ಲಿ 12, ಕೊಡಗಿನಲ್ಲಿ 10, ಬೆಂಗಳೂರಿನಲ್ಲಿ 7, ಹಾಸನದಲ್ಲಿ 4 ಮತ್ತು ಚಿಕ್ಕಮಗಳೂರಿನಲ್ಲಿ 1 ಆನೆ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವನ್ನಪ್ಪಿದೆ ಎಂದು ಉಲ್ಲೇಖಿಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!