ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗದಲ್ಲಿ ನಿನ್ನೆ ಮಧ್ಯರಾತ್ರಿ ಯಶ್ ಬ್ಯಾನರ್ ಹಾಕುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ೫೦ ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ.
ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಗಾಜಿ ಸ್ನೇಹಿತರ ಜೊತೆ ಸೇರಿ ಯಶ್ ಹುಟ್ಟುಹಬ್ಬಕ್ಕಾಗಿ ಬ್ಯಾನರ್ ಕಟ್ಟುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ.
ಇಂದು ಸಂಜೆ ಯಶ್ ಮೃತರ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.