February 16, 2026
Monday, February 16, 2026
spot_img

ಹಂಪಿ ಪ್ರವಾಸೋದ್ಯಮಕ್ಕೆ ಕಪ್ಪುಚುಕ್ಕೆ ಇಟ್ಟವರಿಗೆ ಮೃತ್ಯುದಂಡನೆ: ಗಂಗಾವತಿ ಕೋರ್ಟ್ ಕ್ರಾಂತಿಕಾರಿ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ವಿಶ್ವವೇ ಪಾರಂಪರಿಕ ನಗರಿ ಹಂಪಿಯತ್ತ ತಿರುಗಿ ನೋಡುವಂತೆ ಮಾಡಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ಅಮೆರಿಕ ಪ್ರವಾಸಿಗನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಗಂಗಾವತಿಯ ನ್ಯಾಯಾಲಯವು ಮರಣದಂಡನೆ ವಿಧಿಸಿ ಇಂದು ಆದೇಶಿಸಿದೆ.

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಸಾಣಾಪೂರ ಬಳಿ ಈ ಘಟನೆ ನಡೆದಿತ್ತು. ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಮಲ್ಲೇಶ್, ಸಾಯಿ ಮತ್ತು ಶರಣಪ್ಪ ಎಂಬುವವರು ಅತ್ಯಾಚಾರವೆಸಗಿ, ಜೊತೆಯಲ್ಲಿದ್ದ ಅಮೆರಿಕದ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ್ದರು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಫೆಬ್ರವರಿ 6ರಂದು ಇವರನ್ನು ದೋಷಿಗಳೆಂದು ಘೋಷಿಸಿದ್ದರು. ಇಂದು ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಾಲಯವು, ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !