ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್ನ (Karnataka High Court) 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ (Death Threat) ಸಂದೇಶ ಬಂದಿದೆ.
ಹೈಕೋರ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಮುರಳೀದರ್ ಗೆ ಸಂದೇಶ ಬಂದಿದ್ದು, 50 ಲಕ್ಷ ರೂ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ.
ಪಾಕಿಸ್ತಾನ ಮೂಲದ ಬ್ಯಾಂಕ್ ಖಾತೆ ನಂಬರ್ ನೀಡಿದ್ದಾರೆ. ಅಲೈಡ್ ಬ್ಯಾಂಕ್ ಲಿಮಿಟೆಡ್ನ ಖಾತೆಯ ಸಂಖ್ಯೆಯನ್ನು ದುಷ್ಕರ್ಮಿಗಳು ನೀಡಿದ್ದಾರೆ. ಕೊಲೆ ಮಾಡಿಸುವುದಾಗಿ ವಾಟ್ಸ್ಆ್ಯಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಬೆದರಿಕೆ ಸಂಬಂಧ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಾಟ್ಸ್ಆ್ಯಪ್ ಸಂದೇಶದ ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.