ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಲೀಂ ಖಾನ್ ಬೆಳಿಗ್ಗೆ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಇಬ್ಬರು ಸ್ಕೂಟಿಯಲ್ಲಿ ಬಂದರು ಮತ್ತು ಬುರ್ಖಾ ಧರಿಸಿದ ಮಹಿಳೆ ಸಲೀಂ ಖಾನ್ ಗೆ ಸರಿಯಾಗಿ ನಡೆದುಕೊಳ್ಳಿ, ಇಲ್ಲದಿದ್ದರೆ ನಾನು ಲಾರೆನ್ಸ್ ಬಿಷ್ಣೋಯ್ ಅವರನ್ನು ಕಳುಹಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.
ಸಲೀಂ ಖಾನ್ ಪ್ರಕಾರ, ಸ್ಕೂಟಿಯಲ್ಲಿ ಇಬ್ಬರು ಜನರಿದ್ದರು. ಮಹಿಳೆ ಬುರ್ಖಾ ಧರಿಸಿದ್ದಳು. ಸದ್ಯ ಈ ಮಹಿಳೆಯ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೆಲವು ತಿಂಗಳ ಹಿಂದೆ ಬೆಳಿಗ್ಗೆ ಸಲ್ಮಾನ್ ಖಾನ್ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಗುಂಡಿನ ದಾಳಿಯ ಜವಾಬ್ದಾರಿಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯರೊಬ್ಬರು ವಹಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.