November 12, 2026
Thursday, November 12, 2026
spot_img

ಅರವಿಂದ್‌ ಕೇಜ್ರಿವಾಲ್‌ಗೆ ಕೊ*ಲೆ ಬೆದರಿಕೆ: ಬಿಷ್ಣೋಯ್‌ ಗ್ಯಾಂಗ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಬೇಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನವನು ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಏಳು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ.

ನಾನು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ. ನನಗೆ 7 ಕೋಟಿ ರೂ. ಕೊಡಿ, ಇಲ್ಲದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ವ್ಯಕ್ತಿ ಎಎಪಿ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರಿಗೆ ಕರೆ ಮಾಡಿ, ಜೊತೆಗೆ ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕೂಡಲೇ ಶಾಸಕ ಜರ್ನೈಲ್ ಸಿಂಗ್ ಅವರು ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿದ್ದು, ಈ ತನಿಖೆಯನ್ನು ಸೈಬರ್ ಕ್ರೈಮ್ ಪೊಲೀಸ್ ಸ್ಟೇಷನ್‌ನ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ವಹಿಸಲಾಗಿದೆ.

Must Read