ಉದ್ಯಮಿಗೆ ಕೊಲೆ ಬೆದರಿಕೆ: ಎನ್‌ಸಿಪಿ ನಾಯಕ ಛಗನ್‌ ಭುಜಬಲ್‌ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಮತ್ತು ಇತರ ಇಬ್ಬರ ವಿರುದ್ಧ ಚೆಂಬೂರ್ ಮೂಲದ ಉದ್ಯಮಿಯೊಬ್ಬರು ದೂರು ದಾಖಲಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧ ಭುಜನಲ್ ಮಾತನಾಡುವ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ್ದಕ್ಕಾಗಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಛಗನ್ ಭುಜಬಲ್‌ಗೆ ಎರಡು ವಿಡಿಯೋಗಳನ್ನು ಕಳುಹಿಸಿದ್ದಾಗಿ ದೂರುದಾರ ಉದ್ಯಮಿ ತೆಕಚಂದಾನಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೀಡಿಯೋ ಕಳುಹಿಸಿದ ಕೂಡಲೇ ಅವರಿಗೆ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶಗಳು ಮತ್ತು ಕರೆಗಳು ಬರಲಾರಂಭಿಸಿದವು ಎನ್ನಲಾಗಿದೆ.

ಪ್ರಮುಖ ಒಬಿಸಿ ನಾಯಕರಾದ ಭುಜಬಲ್ ಅವರು ಮಹಾರಾಷ್ಟ್ರದ ಶಾಲೆಗಳಲ್ಲಿ ಸರಸ್ವತಿ ದೇವಿಯ ಭಾವಚಿತ್ರಗಳನ್ನು ಪ್ರದರ್ಶಿಸುವುದನ್ನು ಪ್ರಶ್ನಿಸಿದ್ದರು.

ಭುಜಬಲ್ ಮತ್ತು ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 506 (2) (ಕ್ರಿಮಿನಲ್ ಬೆದರಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯಕ್ಕೆ ತೆಕಚಂದ ಅವರಿಗೆ ಯಾರು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಬೆದರಿಕೆ ಕರೆಗಳನ್ನು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!