ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ ಎದುರಾಗಿದ್ದು, ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಮಧ್ಯರಾತ್ರಿ ಪಿಸಿಆರ್‌ಗೆ ಕರೆಮಾಡಿ ಕೇಜ್ರಿವಾಲ್‌ಗೆ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ. ಈತ 38 ವರ್ಷದ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಕರೆ ಮಾಡಿದ ತಕ್ಷಣವೇ ಪೊಲೀಸರು ಆತನನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. ದೆಹಲಿಯ ಗುಲಾಬಿ ಬಾಗ್‌ನಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾನೆ.