ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ : ನಿವಾಸಕ್ಕೆ ಬಿಗಿಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಶನಿವಾರ ಮೂರು ಬಾರಿ ಕೊಲೆ ಬೆದರಿಕೆ ಕರೆಗಳು ಬಂದಿದೆ .

ಪೊಲೀಸರ ಮಾಹಿತಿ ಪ್ರಕಾರ, ಅಪರಿಚಿತ ವ್ಯಕ್ತಿ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ. ನಾಗ್ಪುರದ ಖಾಮ್ಲಾ ಚೌಕ್‌ನಲ್ಲಿರುವ (Khamla Chowk) ಕಚೇರಿ ಸ್ಫೋಟಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.

ಇದೀಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ . ನಿವಾಸ, ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!