ಪ್ರಮೋದ್ ಮುತಾಲಿಕ್ ಗೆ ಕೊಲೆ ಬೆದರಿಕೆ: ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿದೆ.

ಈ ಕುರಿತಂತೆ ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಕೊಲೆ ಬೆದರಿಕೆ ಕರೆಗಳು ಬಂದಿದ್ದಾವೆ ಎಂದು ತಿಳಿಸಿದ್ದಾರೆ.

ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಮಾತನಾಡುತ್ತಿದ್ದರು. ಇಂದು ಬೆಳಿಗ್ಗೆಯೂ ಕೊಲೆ ಬೆದರಿಕೆ ಕರೆ ಬಂದಿವೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದರು.ಈ ತರದ ಕೊಲೆ ಬೆದರಿಕೆ ಎಷ್ಟೋ ಬಂದಿದ್ದಾವೆ. ನಾನು ಕೊಲೆ ಬೆದರಿಕೆಗೆ ಹೆದರೋದಿಲ್ಲ. ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!