ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ.
ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.